ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈ ಬಿಡದಿದ್ದರೆ ಉಗ್ರ ಹೋರಾಟ: ನಗರದಲ್ಲಿ ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಳಿ
ಪ್ರಸ್ತಾವಿತ ಬಹುಕೋಟಿ ಅಂದಾಜಿನ ಪರಿಸರ ಮಾರಕ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಸದರಿ ಯೋಜನೆಯನ್ನು ತಕ್ಷಣ ಹಿಂಪಡೆಯದಿದ್ದರೆ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜನರು ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಪರಿಸರ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಳಿ ಯವರು ಕೆಪಿಸಿಎಲ್ ನ ಅಧಿಕಾರಿಗಳು ಇತ್ತೀಚೆಗೆ ಶಿವಮೊಗ್ಗ ಸಾಗರ,ಹೊನ್ನಾವರ,ಕಾರವಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಯೋಜನೆಯಿಂದ ಪರಿಸರಕ್ಕಾಗಲಿ,ಸಾರ್ವಜನಿಕರಿಗಾಗಲಿ,ವನ್ಯಜೀವಿಗಳಿಗಾಗಲಿ ಯಾವುದೇ ಹಾನಿಯಾಗುವುದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದರು ಆರೋಪಿಸಿದರು.