ಕುಂದಗೋಳ: ಕುಂದಗೋಳ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಎಂ.ಆರ್.ಪಾಟೀಲ್
ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪ್ರದೇಶಾಭಿವೃದ್ಧಿ ಯೋಜನೆ ಅಡಿ 5 ಲಕ್ಷ ರೂ. ವೆಚ್ಚದಲ್ಲಿ ಇಂದು ಕುಂದಗೋಳ ಕ್ಷೇತ್ರದಲ್ಲಿ  ಸಾಂಸ್ಕೃತಿಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ  ಕಾಮಗಾರಿಗೆ ಶಾಸಕರಾದ ಎಂ.ಆರ್.ಪಾಟೀಲ್ ಅವರು ಚಾಲನೆ ನೀಡಿದರು. ಈ ಭವನವು ಸ್ಥಳೀಯ ಕಲಾವಿದರು, ಯುವಕರು ಹಾಗೂ ಸಾಮಾಜಿಕ ಸಂಘಟನೆಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು, ಸಭೆ-ಸಮ್ಮೇಳನಗಳನ್ನು ಆಯೋಜಿಸಲು ಮತ್ತು ಜನಸೇವಾ ಕಾರ್ಯಗಳನ್ನು ಮುಂದುವರಿಸಲು ಪ್ರೇರಣೆಯ ಕೇಂದ್ರವಾಗಲಿದೆ ಎಂದರು. ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ರೈತ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.