ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಇಂದು ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದ್ದಾರೆ. ಇನ್ನು ಈ ಪ್ರವಾಸದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದಾಗ, "ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ" ಎಂದಿದ್ದಾರೆ.