ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪಬ್, ಬಾರ್, ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರೊಂದಿಗೆ ಸಭೆ ನಡೆಸಿದರು. ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಪಾಲನೆಗೆ ಒತ್ತು ನೀಡುವಂತೆ ಸೂಚನೆ ನೀಡಿದ ಅವರು, ಡಿಸೆಂಬರ್ 31ರಂದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ನಗರದಾದ್ಯಂತ 50 ಫೈಓವರ್ಗಳನ್ನು ರಾತ್ರಿ ಹತ್ತು ಗಂಟೆಯ ನಂತರ ವಾಹನ ಸಂಚಾರಕ್ಕೆ ಮುಚ್ಚಲಾಗುವುದು, ಇದರಿಂದ ಸಂಚಾರ ದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸುವ ಉದ್ದೇಶವಿದೆ ಎಂದು ಅವರು ವಿವರಿಸಿದರು