ಧಾರವಾಡ: ವನ, ವನ್ಯ ಸಂಪತ್ತಿನ ಸಂರಕ್ಷಣೆಯ ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ: ನಗರದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ
ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಇಂದಿನ ಸನ್ನಿವೇಶದಲ್ಲಿ ವನ, ವನ್ಯ ಸಂಪತ್ತಿನ ಸಂರಕ್ಷಣೆಯ ಜವಾಬ್ದಾರಿ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಸೋಮವಾರ ಮಧ್ಯಾಹ್ನ 2 ಗಂಟೆಗೆ ಧಾರವಾಡ ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಅರಣ್ಯ ಇಲಾಖೆಯ ಕ್ರೀಡಾಕೂಟ ಉದ್ಘಾಟಿಸಿ, ಮಾತನಾಡಿದ ಅವರು, ಸಂವಿಧಾನದ ಆಶಯದಂತೆ ನಾನು ಜೀವಂತ ಜೀವಿಗಳ ಬಗ್ಗೆ ಸಹಾನುಭೂತ