ಖಾನಾಪುರ: ದೇವಲತ್ತಿ ಗ್ರಾಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ಗೊಳಿಸಿದ ಶಾಸಕ ವಿಠಲ ಹಲಗೇಕರ
ದೇವಲತ್ತಿ ಗ್ರಾಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕದ ಉದ್ಘಾಟನೆ ಗೊಳಿಸಿದ ಶಾಸಕ ವಿಠಲ ಹಲಗೇಕರ. ದೇವಲತ್ತಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅವರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಲಾದ ಪ್ಲಾಸ್ಟಿಕ್ ತ್ಯಾಜ್ಯ ಘಟಕ ಶುಕ್ರವಾರ ಉದ್ಘಾಟನೆ ಗೊಳಿಸಿದ ಶಾಸಕ ವಿಠಲ್ ಹಲಗೇಕರ ಈ ಸಂದರ್ಭದಲ್ಲಿ ಮಾತನಾಡಿದ ಅವರು. ನಮ್ಮ ಗ್ರಾಮಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಲ್ಲಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಇಂತಹ ಘಟಕಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಮತ್ತು ಈ ಘಟಕದ ಸದುಪಯೋಗ ಪಡೆದುಕೊಂಡು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಹೇಳಿದರು