ಮೆಕ್ಕೆಜೋಳಕ್ಕೆ ಖರೀದಿಗೆ ಧಾರವಾಡ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ರೈತ ಸೇನೆಯ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರೈತರಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಿ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮುಖಂಡರು ಆಗ್ರಹಿಸಿದರು. ಈ ವೇಳೆ ಶಂಕರ ಅಂಬಲಿ ಸೇರಿದಂತೆ ಇತರರಿದ್ದರು.