ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೂ ಅಮೃತಹಳ್ಳಿ ಮುಖ್ಯರಸ್ತೆಯಲ್ಲಿರುವ ಬ್ಯಾಟರಾಯನಪುರ ನಿಯಂತ್ರಣ ಕೊಠಡಿಯಲ್ಲಿ ನಾಗರಿಕರ ಅಹವಾಲುಗಳನ್ನು ಆಲಿಸಿ, ನೇರ ಸ್ಪಂದನೆ ಮಾಡುವ ಸಂಬಂಧ ಫೋನ್–ಇನ್ ಕಾರ್ಯಕ್ರಮ ನಡೆಸಿದರು. ಆಯುಕ್ತರು ಫೋನ್ ಇನ್ ಕಾರ್ಯಕ್ರಮವನ್ನು ಸೆಪ್ಟೆಂಬರ್ 26 ರಿಂದ ಪ್ರಾರಂಭಿಸಿದ್ದು, ಕಳೆದ 13 ವಾರಗಳಲ್ಲಿ ಒಟ್ಟು 730 ಅಹವಾಲುಗಳು ಸ್ವೀಕೃತವಾಗಿದ್ದು, ಎಲ್ಲಾ ಅಹವಾಲುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಲಾಗಿದ್ದು, ಅವುಗಳಲ್ಲಿ 481 ಅಹವಾಲುಗಳ ಕುರಿತು ಕ್ರಮ ಕೈಗೊಳ್ಳಲಾಗಿರುತ್ತದೆ.