ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಹಿನ್ನಲೆ:ನಗರದಲ್ಲಿ ಬೃಹತ್ ನಮೋ ವಾಕಥಾನ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ರವರ 75ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಚಿಕ್ಕಬಳ್ಳಾಪುರದ ಲೋಕಸಭಾ ಸಂಸದ ಡಾ.ಕೆ.ಸುಧಾಕರ್ ರವರ ನೇತೃತ್ವದಲ್ಲಿ ನಗರದ ಜೈ.ಭೀಮ್ ಹಾಸ್ಟೆಲ್ ನಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗಿಡ ನೆಡುವ ಮೂಲಕ ಸೇವಾ ಪಾಕ್ಷಿಕ ಅಭಿಯಾನ 2025 ಕ್ಕೆ ನಮೋ ಯುವ ವಾಕಥಾನ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿಲಾಯಿತು. ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯ ಯುವಕ ಯುವತಿಯರು ಹಾಗೂ ಸಾರ್ವಜನಿಕರಿಗೆ ನಮ್ಮ ಜೀವನದ ದಿನನಿತ್ಯದ ಭಾಗವಾಗಿ ವಾಕಥಾನ್ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳುವುದರಿಂದ ಆಗುವ ಆರೋಗ್ಯದ ಪ್ರಯೋಜನದ ಕುರಿತಾಗಿ ಅರಿವು ಮೂಡಿಸಲಾಯಿತು.