ಮಾನ್ವಿ: ಮಹಾಮಳೆಗೆ ಬಾಗಲವಾಡ ಗ್ರಾಮದ ಬಳಿಯ ಸೇತುವೆ ಮುಳುಗಡೆ,ಗ್ರಾಮಸ್ಥರ ಪರದಾಟ
Manvi, Raichur | Sep 28, 2025 ರಾಯಚೂರು ಜಿಲ್ಲೆಯಲ್ಲಿ ಅನೇಕ ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಅವಾಂತರ ಸೃಷ್ಟಿಸಿದ್ದು, ಅದರಂತೆ ಮಾನವಿ ತಾಲೂಕಿನ ಬಾಗಲವಾಡ ಗ್ರಾಮದ ಬಳಿಯ ಸೇತುವೆ ಹಳ್ಳದ ನೀರು ಭಾರಿ ಪ್ರಮಾಣದಲ್ಲಿ ಹರಿದು ಬಂದಿದ್ದರಿಂದ ಮುಳುಗಡೆಯಾಗಿದ್ದು ಗ್ರಾಮದ ಜನರು ರಸ್ತೆ ಸಂಚಾರ ಬಂದ್ ಆಗಿದ್ದರಿಂದ ಪರದಾಡುವಂತಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ರಸ್ತೆ ಬಂದ್ ಆಗಿದ್ದರಿಂದ ತುಂಬಾ ತೊಂದರೆ ಅನುಭವಿಸುವಂತಾಗಿದೆ. ಸ್ಥಳೀಯ ಶಾಸಕರು ಸೇತುವೆಯ ಎತ್ತರವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಗ್ರಾಮದ ಜನರು ಶಾಸಕರಿಗೆ ಮನವಿ ಮಾಡುತ್ತಿದ್ದಾರೆ.