ಬೆಂಗಳೂರು ಪೂರ್ವ: ನಗರದಲ್ಲಿ ಅನಾರೋಗ್ಯ ಪೀಡಿತ ಪತ್ನಿಯನ್ನು ಕೊಲೆಮಾಡಿದ್ದ ವೈದ್ಯನ ಬಂಧನ
ಐವಿ ಇಂಜೆಕ್ಷನ್ ಮೂಲಕ ಪತ್ನಿಯನ್ನ ಕೊಂದಿದ್ದ ವೈದ್ಯ ಪತಿಯನ್ನ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಾರತ್ ಹಳ್ಳಿ ಪೊಲೀಸ್ ಠಾಣೆ ಕರೆ ತಂದಿದ್ದಾರೆ. ಪತ್ನಿ ಕೃತಿಕಾ ರೆಡ್ಡಿಗೆ ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ಲೋ ಶುಗರ್ ಸಮಸ್ಯೆ ಇದ್ದರು ವಿಷಯ ಮುಚ್ಚಿಟ್ಟು ವೈದ್ಯ ಮಹೇಂದ್ರನಿಗೆ ಕೃತಿಕಾ ರೆಡ್ಡಿ ಪೋಷಕರು ಮದುವೆ ಮಾಡಿಕೊಟ್ಟರು. ಮದುವೆಯಾದ ಬಳಿಕ ಈ ವಿಚಾರ ಮಹೇಂದ್ರನಿಗೆ ಗೊತ್ತಾಗಿತ್ತು. ನಿತ್ಯ ವಾಂತಿ ಹಾಗೂ ಇತರ ಸಮಸ್ಯೆಯಿಂದ ಕೃತಿಕಾ ಬಳಲ್ತಿದ್ದರು. ಇದೇ ಕಾರಣಕ್ಕೆ ಆರೋಪಿ ಕೊಲೆಗೆ ಸಂಚು ರೂಪಿಸಿದ್ದ. ತಂದೆ ಮನೆಯಲ್ಲಿ ಹುಷಾರಿಲ್ಲದೇ ಮಲಗಿದ್ದ ಕೃತಿಕಾಗೆ ಆರೋಪಿ ಐವಿ ಇಂಜೆಕ್ಷನ್ ಮೂಲಕ ಒಂದಷ್ಟು ಮೆಡಿಸನ್ ನೀಡಿದ್ದ. ಎರಡು ದಿನ ನಿರಂತರ ಮೆಡಿಸಿನ್ ನೀಡಲಾಗಿತ್ತು.