ಮೈಸೂರು: ನಗರದಲ್ಲಿರುವ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ: ಅಗತ್ಯ ಸಿದ್ದತೆಗೆ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ
Mysuru, Mysuru | Jun 10, 2025 ನಗರದ ಅಂಬಾವಿಲಾಸ ಅರಮನೆ ಮೈದಾನದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು’ ಎಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು ಯೋಗಕ್ಕೆ ಪ್ರಸಿದ್ಧ ವಾಗಿದ್ದು ಈ ಕಾರ್ಯಕ್ರಮಕ್ಕೆ ಹೆಚ್ಚು ಸಾರ್ವಜನಿಕರು ಭಾಗವಹಿಸುವುದು ಮುಖ್ಯವಾಗಿದೆ.