ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಬೆಂಗಳೂರಿನ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಸಚಿವ ಈಶ್ವರ ಬಿ ಖಂಡ್ರೆ ಅವರು ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವರ್ಷದಲ್ಲಿ 10 ಲಕ್ಷ ಜನರಿಗೆ ನೀರು ಪೂರೈಸುವ ಸಾಮರ್ಥ್ಯವಿರುವ ಹೆಸರುಘಟ್ಟ ಕೆರೆಗೆ ಗೃಹ ತ್ಯಾಜ್ಯವಾಗಲೀ, ಕೈಗಾರಿಕಾ ತ್ಯಾಜ್ಯವಾಗಲೀ ಸೇರದಂತೆ ಎಚ್ಚರಿಕೆ ವಹಿಸಬೇಕು, ಅರ್ಕಾವತಿ ನದಿ ಮಲಿನವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ನೈಸರ್ಗಿಕವಾಗಿ ಬೆಳೆದಿರುವ ಹುಲ್ಲುಗಾವಲಿನ ಸಂರಕ್ಷಣೆಯ ಜೊತೆಗೆ ಸಂವರ್ಧನೆಯನ್ನೂ ಮಾಡಬೇಕು, ಸುತ್ತಮುತ್ತಲ ಗ್ರಾಮಗಳ ಜನರ ದನಕರು, ಮೇಕೆ ಮೇಯಲು ಮುಕ್ತ ಅವಕಾಶ ಇರಬೇಕು ಎಂದರು.