ದಾಂಡೇಲಿ: ಬರ್ಚಿ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆವರಣ ಗೋಡೆಗೆ ಡಿಕ್ಕಿ
ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆವರಣ ಗೋಡೆಗೆ ಕಾರೊಂದು ಡಿಕ್ಕಿಯಾದ ಘಟನೆ ದಾಂಡೇಲಿ ನಗರದ ಬರ್ಚಿ ರಸ್ತೆಯಲ್ಲಿ ಇಂದು ಗುರುವಾರ ಬೆಳಿಗ್ಗೆ ನಾಲ್ಕುವರೆ ಗಂಟೆ ಸುಮಾರಿಗೆ ನಡೆದಿರುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಕೆ.ಸಿ.ವೃತ್ತದ ಕಡೆಯಿಂದ ಬರುತ್ತಿದ್ದ ಈ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಖಾಸಗಿ ಮನೆಯೊಂದರ ಆವರಣ ಗೋಡೆಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯ ನೋವು ಸಂಭವಿಸಿಲ್ಲ.