ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ–2025ರ ಹಿನ್ನೆಲೆಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಇಂದು ಅಮೃತ ಹಳ್ಳಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಕ್ಕೂರು ಮುಖ್ಯ ರಸ್ತೆಯವರೆಗೆ ಸುಮಾರು 3 ಕಿ.ಮೀ ಜಾಗೃತಿ ಜಾಥಾ ನಡೆಯಿತು. ಡಿಸೆಂಬರ್ 21 ರಿಂದ 24 ರವರೆಗೆ ನಡೆಯುವ ಪಲ್ಸ್ ಪೋಲಿಯೊ ಅಭಿಯಾನವನ್ನು ಸದುಪಯೋಗಪಡಿಸಿಕೊಂಡು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಂಟಿ ಆಯುಕ್ತ ಶ್ರೀ ಮೊಹಮ್ಮದ್ ನಯೀಮ್ ಮೊಮಿನ್, ಆರೋಗ್ಯಾಧಿಕಾರಿ ಡಾ. ಸುರೇಂದ್ರ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗ