ಹಿಂದೂ ಧರ್ಮದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನರಿಗೆ ಆಮಿಷ ತೋರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ ಎಂದು ಅಲೆಮಾರಿ ಸಮಾಜದ ಮುಖಂಡ ರಾಜು ಮೋಹನ್ ಮಾಳೆ ತಿಳಿಸಿದರು. ನಗರದಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಮಿಷ ತೋರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡುವುದು ಸರಿಯಲ್ಲ, ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.