ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸದಾಶಿವನಗರದ ಮಾಜಿ ಸಂಸದ ಡಿಕೆ ಸುರೇಶ್ ಅವರ ನಿವಾಸದಲ್ಲಿ ಕರ್ನಾಟಕ ಭೀಮ ಸಂಘಟನೆಗಳ ಮಹಾ ಒಕ್ಕೂಟದ ಸದಸ್ಯರು ಭೇಟಿ ಮಾಡಿ, ಬೆಂಗಳೂರು ದಕ್ಷಿಣ ತಾಲೂಕು ಉತ್ತರಹಳ್ಳಿ ಹೋಬಳಿಯ ಕೆಂಬತ್ತಹಳ್ಳಿ ಗ್ರಾಮದ ಸರ್ವೆ ನಂ.55 ರಲ್ಲಿ 8 ಎಕರೆ 10 ಗುಂಟೆ ಆಶ್ರಯ ಯೋಜನೆಗೆ ಮಂಜೂರಾಗಿದ್ದು, ಸುಮಾರು 300ಕ್ಕೂ ಹೆಚ್ಚು ಫಲಾನುಭವಿಗಳು ಮನೆಗಳನ್ನು ಕಟ್ಟಿಕೊಳ್ಳಲು ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು.