ಶಿಕಾರಿಪುರ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಗುರವಾರ ಮಾಧ್ಯಹ್ನ 1 ಗಂಟೆಗೆ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಸ್ವೀಪ್ ಸಮಿತಿ, ಪುರಸಭೆ ಶಿಕಾರಿಪುರ,ಇವರ ವತಿಯಿಂದ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ಕಳೆದ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 70% ಕ್ಕಿಂತ ಕಡಿಮೆ ಮತದಾನ ಆಗಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಆಯೋಗದಿಂದ ದಿ.7-5-2024 ರಂದು ನಡೆಯುವ 2024 ನೇ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಲಾಯಿತು.