ಚಿಕ್ಕಬಳ್ಳಾಪುರ: ಅಕ್ಟೋಬರ್ 7ಕ್ಕೆ ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆ: ನಗರದಲ್ಲಿ ಜಿಲ್ಲಾಧಿಕಾರಿ ಪಿ.ಎನ್ .ರವೀಂದ್ರ
ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಕ್ಟೋಬರ್ 7 ರಂದು ನಗರದ ಕನ್ನಡ ಭವನದಲ್ಲಿ ಸಂಭ್ರಮ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಸಮುದಾಯದ ಮುಖಂಡರಿಂದ ಸಲಹೆಗಳನ್ನು ಸ್ವೀಕರಿಸಿದ ನಂತರ ಅವರು ಮಾತನಾಡಿದರು.