ಸೇಡಂನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಆಯೋಜನೆ ಮಾಡಲಾಗಿತ್ತು. ಸಚಿವ ಶರಣಪ್ರಕಾಶ ಪಾಟೀಲ್ ಭಾಗವಹಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. ಶೈಕ್ಷಣಿಕ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.