ಕಲಬುರಗಿ: ಆಳಂದ ತಾಲೂಕಿನಲ್ಲಿ ಮಳೆಯಿಂದ ಭಾರಿ ಪ್ರಮಾಣದ ಹಾನಿ: 70ಕೋಟಿ ಪರಿಹಾರಕ್ಕೆ ನಗರದಲ್ಲಿ ಶಾಸಕ ಬಿ ಆರ್ ಪಾಟೀಲ್ ಆಗ್ರಹ
ಆಳಂದ ತಾಲೂಕಿನಲ್ಲಿ ವಾಡಿಕೆಗಿಂತ ಶೇ. 50ಕ್ಕೂ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಬೆಳೆ ಮತ್ತು ಆಸ್ತಿಪಾಸ್ತಿ ಹಾನಿಯಾಗಿದೆ ಎಂದು ಮಂಗಳವಾರ 4 ಗಂಟೆಗೆ ಮಾತನಾಡಿದ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ ಸುಮಾರು 70 ಕೋಟಿ ರೂ. ನಷ್ಟವಾಗಿದ್ದು, ರಾಜ್ಯ ಸರ್ಕಾರದಿಂದ ಇಷ್ಟೊಂದು ಪರಿಹಾರ ಒದಗಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಕೇಂದ್ರ ಸರ್ಕಾರದ ಸಹಕಾರ ಪಡೆದುಕೊಂಡು ಆಳಂದ ಕ್ಷೇತ್ರಕ್ಕೆ ಕನಿಷ್ಠ 70 ಕೋಟಿ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದರು.