ವಿಜಯಪುರ: ವಿಜಯಪುರದಲ್ಲಿ ಹೆಚ್ಚಿದ ಡ್ರಗ್ಸ್ ಹಾವಳಿ: ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ವಿಜಯಪುರದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಯುವಜನರ ಭವಿಷ್ಯದ ದೃಷ್ಟಿಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.