ಬೀದರ್: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲಿ : ಬೆಳಗಾವಿ ಅಧಿವೇಶನದಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಒತ್ತಾಯ
Bidar, Bidar | Dec 12, 2025 ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಯೋಜನೆಗಳನ್ನು ರಾಜ್ಯ ಸರ್ಕಾರ ರೂಪಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಒತ್ತಾಯಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತದ ವಿಶೇಷ ಚರ್ಚಾ ಅವಧಿಯಲ್ಲಿ ಶುಕ್ರವಾರ ಮಧ್ಯಾಹ್ನ 1:35ಕ್ಕೆ ಅವರು ಮಾತನಾಡಿದರು.