ಸಂಡೂರು: ಸಂಡೂರಿನ ಎನ್. ಎಂ. ಡಿ. ಸಿ ಕಾರ್ಮಿಕರಿಂದ ದಿಢೀರ್ ಪ್ರತಿಭಟನೆ
Sandur, Ballari | Sep 26, 2026 ಬಳ್ಳಾರಿ ಜಿಲ್ಲೆಯ ಸಂಡೂರಿನ ಎನ್. ಎಂ. ಡಿ. ಸಿ ಪೆಲೆಟ್ ಪ್ಲಾಂಟ್ ಕಾರ್ಮಿಕರು ಇಂದು ಪ್ರತಿಭಟನೆ ನಡೆಸಿದ್ದಾರೆ. ಹಿಂದಿನ ವೇತನ ನೀಡಬೇಕು ಹಾಗೂ ಕಾರ್ಮಿಕರ ಮೇಲಿನ ಕಿರುಕುಳ ನಿಲ್ಲಿಸಬೇಕು ಎಂಬ ಬೇಡಿಕೆಗಳಿಗಾಗಿ ಸಂಯುಕ್ತ ಗಣಿ ಕಾರ್ಮಿಕರ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿತ್ತು.