ಸಿದ್ಧಾಪುರ: ಪಟ್ಟಣದ ಬಾಲಭವನ ಸೇರಿದಂತೆ ವಿವಿಧೆಡೆ ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ಭಾಗಿ
ಶಿರಸಿ : ಶಾಸಕ ಭೀಮಣ್ಣ ನಾಯ್ಕ ಅವರು ಮಂಗಳವಾರ ಸಿದ್ದಾಪುರ ಪಟ್ಟಣದ ವಿವಿಧೆಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪಟ್ಟಣದ ಬಾಲಭವನದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಉದ್ಘಾಟಿಸಿ ನಿವೃತ್ತ ನೌಕರರನ್ನು ಸನ್ಮಾನಿಸಿ ಹಿರಿಯ ನಾಗರಿಕರನ್ನು ಸಮಾಜದ ಪ್ರತಿಯೊಬ್ಬರು ಗೌರವದಿಂದ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು. ಬಳಿಕ ಸಿದ್ದಾಪುರದ ಟಿಎಂಎಸ್ ಸಭಾಭವನದಲ್ಲಿ ಪಶುಸಂಗೋಪನಾ ಇಲಾಖೆಯ ವಿಸ್ತರಣಾ ಕಾರ್ಯಕ್ರಮದಡಿಯಲ್ಲಿ ರೈತರಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಕೃಷಿಕರು ಹೈನುಗಾರಿಕರಗೆ ಹೆಚ್ಚು ಆದ್ಯತೆ ನೀಡುವಂತೆ ಕರೆ ನೀಡಿದರು.