ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಶುಕ್ರವಾರ 1 ಗಂಟೆಗೆ ಸಿಂಧನೂರು ಪಟ್ಟಣದ ಟೌನ್ ಹಾಲ್ನಲ್ಲಿ ವಿಶೇಷ ಕಾರ್ಯಕ್ರಮ ಸೈಬರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಯಚೂರು ಜಿಲ್ಲೆಯ ವಿವಿಧ ಶಾಲಾ–ಕಾಲೇಜುಗಳಿಂದ ಭಾಗವಹಿಸಿದ್ದ ವಿದ್ಯಾರ್ಥಿಗಳು ಪ್ರಬಂಧ, ಚರ್ಚಾ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದು, ಸ್ಪರ್ಧೆಯ ವಿಜೇತರಿಗೆ ವೇದಿಕೆಯಲ್ಲಿ ಬಹುಮಾನ ವಿತರಣೆ ನಡೆಯಿತು. ಸೈಬರ್ ಅಪರಾಧಗಳ ತಡೆ, ಜಾಗೃತಿ ಮತ್ತು ಸುರಕ್ಷತಾ ಕ್ರಮಗಳ ಕುರಿತು ಮಾನ್ಯ ಎಸ್ಪಿ ಸಾಹೇಬರು ವಿದ್ಯಾರ್ಥಿಗಳ ಜೊತೆ ನೇರ ಸಂವಾದ, ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಆನ್ಲೈನ್ ಮೋಸ, ಡಿಜಿಟಲ್ ಸುಳಿವುಗಳು, ವೈಯಕ್ತಿಕ ಮಾಹಿತಿಯ ರಕ್ಷಣೆ ಮತ್ತು ಸಾಮಾಜಿಕ ಜಾಲತಾಣಗಳ ಜವಾಬ್ದಾರಿಯುತ ಬಳಕೆಯ ಬಗ್ಗೆ ವಿವರಿಸಿದರು.