ಕಾರವಾರ: ಸೌಹಾರ್ದ ಸಂಘ ವಂಚನೆ 54 ಕೋಟಿ ರೂ. ಪ್ರಕರಣದ ಪ್ರಮುಖ ಆರೋಪಿ ಬಂಧನ ಗ್ರಾಹಕರಿಗೆ ಹಣ ಮರುಪಾವತಿಗೆ ನಗರದಲ್ಲಿ ಗಜೇಂದ್ರ ನಾಯ್ಕ ಆಗ್ರಹ
ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಶನಿವಾರ ಮಧ್ಯಾಹ್ನ 2.50ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಸಾಮಾಜಿಕ ಹೋರಾಟಗಾರ ಡಾ. ಗಜೇಂದ್ರ ನಾಯ್ಕ ಸದಾಶಿವಗಡದ ಜೈ ದುರ್ಗಾಮಾತಾ ಸೌಹಾರ್ದ ಸಂಘದಲ್ಲಿ ನಡೆದಿರುವ 54 ಕೋಟಿ ರೂ. ಮೌಲ್ಯದ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಒಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ವಂಚನೆಗೊಳಗಾದ ಗ್ರಾಹಕರಿಗೆ ಹಣವನ್ನು ಮರಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದರು.