ಕೊಳ್ಳೇಗಾಲ: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ಗೊಂದಲಗಳ ಬಗ್ಗೆ ಕೇಳಿದ ಪ್ರಶ್ನೆಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಕೊಳ್ಳೇಗಾಲ ಪಟ್ಟಣದಲ್ಲಿ ಡಾ. ಬಿಆರ್. ಅಂಬೇಡ್ಕರ್ ಪುತ್ಥಳಿಯ ಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ವಿಚಾರ ಸಂಪೂರ್ಣವಾಗಿ ಕೆಲವು ಮಂದಿಯ ಕಲ್ಪನೆ ಮಾತ್ರ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲವೇ ಇಲ್ಲ” ಎಂದು ಸ್ಪಷ್ಟಪಡಿಸಿದರು. ---