ಶಿವಮೊಗ್ಗ: ತ್ಯಾಜವಳ್ಳಿ ಸಮೀಪ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ರೌಡಿಶೀಟರ್ ಕಾಲಿಗೆ ಗುಂಡಿಕ್ಕಿದ ಪೊಲೀಸರು
ಪೋಲಿಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಕಾಲಿಗೆ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಕಾಲಿಗೆ ಗುಂಡೇಟು ಹೊಡೆದಿರುವ ಘಟನೆ ಮಂಗಳವಾರ ಜರುಗಿದೆ.ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜ ವಿರುದ್ಧ ಕೊಲೆ ಯತ್ನ ಎನ್ ಡಿ ಪಿ ಎಸ್ ಕಾಯ್ದೆ ಅಡಿ ಐದು ಪ್ರಕರಣಗಳಿದ್ದು ತಲೆಮಾರಿಸಿಕೊಂಡಿದ್ದ ರಜಾಕ್ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಹೊಳೆಹೊನ್ನೂರು ಠಾಣೆಯ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಆತನನ್ನ ಬಂಧಿಸಲು ಹೋದಾಗ ಸಿಬ್ಬಂದಿ ಅರ್ಜುನ್ ಮೇಲೆ ರಜಾಕ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ.ಈ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ.