ಬೆಳಗಾವಿ: ಬೆಳಗಾವಿ ಬಡೇಕ್ಕೊಳ್ಳಮಠದ ಹತ್ತಿರ ಭೀಕರ ರಸ್ತೆ ಅಪಘಾತ ಎರಡು ಸಾವು
ಬೆಳಗಾವಿ ಬಡೇಕ್ಕೊಳ್ಳಮಠದ ಹತ್ತಿರ ಭೀಕರ ರಸ್ತೆ ಅಪಘಾತ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಗ್ರಾಮದ ಬಳಿ ಇರುವ ಬಡೇಕ್ಕೊಳ್ಳಮಠದ ಹತ್ತಿರ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ರವಿವಾರ 5 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಲಾರಿ, ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಈ ಸರಣಿ ಅಪಘಾತದಿಂದಾಗಿ ರಸ್ತೆ ಮೇಲೆ ಟ್ರಾಪೀಕ್ ಜಾಮ್ ಉಂಟಾಗಿದ್ದು ಸ್ಥಳಕ್ಕೆ ಹಿರೇಬಾಗೆವಾಡಿ ಪೊಲೀಸರು ತಕ್ಷಣ ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ