ಮುಂಡಗೋಡ: ಆಟೋಚಾಲಕರಿಂದ ಮೇರು ನಟ ಪುನೀತ್ ರಾಜಕುಮಾರ ಅವರ ಪುಣ್ಯಸ್ಮರಣೆ ,ಪುಷ್ಪ ನಮನ ಸಲ್ಲಿಸಿದ ಶಾಸಕ ಹೆಬ್ಬಾರ್
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಆಟೋ ಚಾಲಕರು ಆಯೋಜಿಸಿದ್ದ ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಪುನೀತ್ ರಾಜಕುಮಾರ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ್ ಪಾಲ್ಗೊಂಡು ಕರ್ನಾಟಕ ರತ್ನ ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಮ್.ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ಪ್ರಮುಖರಾದ ಸಿದ್ಧಪ್ಪ ಹಡಪದ, ಕೆ.ಸಿ.ಗಲಭಿ ಸೇರಿದಂತೆ ಇತರರು ಇದ್ದರು.