5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕೇಂದ್ರ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಹೊಸದಾಗಿ ರಚನೆಯಾದ ಜಿಬಿಎ, ಅದರ ವ್ಯಾಪ್ತಿಯ ಐದು ನಗರ ಪಾಲಿಕೆಗಳು ಹಾಗೂ 369 ವಾರ್ಡ್‌ಗಳಿಗೆ ಸಂಬಂಧಿಸಿದ ಆಡಳಿತ, ತೆರಿಗೆ ಸಂಗ್ರಹ ಮತ್ತು ಆರ್ಥಿಕ ಸಮತೋಲನದ ಅಂಶಗಳನ್ನು ಚರ್ಚಿಸಲಾಯಿತು. ಈ ಎಲ್ಲ ವಿಷಯಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸುಗಳೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಾ. ನಾರಾಯಣಸ್ವಾಮಿ ಅವರು ತಿಳಿಸಿದರು.