ಹೊಸನಗರ: ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆದ್ಯತೆ ನೀಡಿ, ಕೆದಲುಗುಡ್ಡೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ
ಇತ್ತೀಚೆನ ವರ್ಷಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದೆ. ಅಲ್ಲದೆ ಅಡಿಕೆ ಸೇವನೆಯಿಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ ಬರುತ್ತದೆಂದು ಸುಪ್ರೀಂಕೋರ್ಟ್ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ, ಸಾಗರ, ತೀರ್ಥಹಳ್ಳಿ, ಕೊಪ್ಪ, ಶೃಂಗೇರಿ ಹಲವು ಕಡೆಯಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗದಿಂದಾಗಿ ಅಡಿಕೆ ತೋಟ ಬರಿದಾಗುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೆದಲುಗುಡ್ಡೆಯ ಸೆಲಿ ಜೋಸೆಫ್ ಅವರ ತೋಟಕ್ಕೆ ಭೇಟಿ ನೀಡಿ ಮಾತನಾಡಿದರು.