ಕಲಬುರಗಿ: ನಗರದಲ್ಲಿ ಸೇನಾ ಆಯ್ಕೆ ಪೂರ್ವ ತರಬೇತಿಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ
ಕಲಬುರಗಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಗೆ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ 5 ಗಂಟೆಗೆ ಚಾಲನೆ ನೀಡಿದರು. ಶಾಲೆಯಲ್ಲಿ ಈಗ 100 ಮಕ್ಕಳಿಗೆ ತರಬೇತಿ ದೊರೆಯುತ್ತಿದ್ದು, ಅಗತ್ಯವಿದ್ದಲ್ಲಿ ಇದನ್ನು 500ಕ್ಕೆ ಹೆಚ್ಚಿಸಲು ಸೂಚನೆ ನೀಡಿದರು. ದೇಶ ಸೇವೆಗೆ ಮಕ್ಕಳನ್ನು ಸೈನಿಕರಾಗಿ ತಯಾರಿಸುವ ನಿಟ್ಟಿನಲ್ಲಿ ಎಲ್ಲ ಮೂಲಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.. ಕಾರ್ಯಕ್ರಮದಲ್ಲಿ ಬಂಕರ್ ಡ್ರಿಲ್ ಸೇರಿದಂತೆ ವಿದ್ಯಾರ್ಥಿಗಳಿಂದ ವಿವಿಧ ಪ್ರದರ್ಶನಗಳು ನಡೆದವು. ಜಿಲ್ಲಾಧಿಕಾರಿಗಳು ಮತ್ತು ಇನ್ನಿತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.