ರಾಯಚೂರು: ಸಿಂಧನೂರು ಪಟ್ಟಣದಲ್ಲಿ ಮಹಾಗಣಪತಿ ಅಂಗವಾಗಿ ಹೋಮ ಮಹಾ ಯಜ್ಞ ಕಾರ್ಯಕ್ರಮ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿ ಸ್ಥಳದಲ್ಲಿ ಲೋಕಕಲ್ಯಾಣಾರ್ಥವಾಗಿ ಹೋಮ ಮಹಾಯಜ್ಞ ಕಾರ್ಯಕ್ರಮ ನಡೆಸಲಾಯಿತು. ಭಾನುವಾರ ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು ಹಾಗೂ ನೂರಾರು ಸಂಖ್ಯೆಯ ಹಿಂದೂ ಮಹಾಗಣಪತಿಯ ಭಕ್ತರು ಭಾಗವಹಿಸಿ ಹೋಮ ಯಜ್ಞ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಣೇಶನಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಲೋಕಕಲ್ಯಾಣಾರ್ಥವಾಗಿ ಪ್ರಾರ್ಥಿಸಿದರು.