ಸಿಂದಗಿ: ಗಣಿಯಾರ ಗ್ರಾಮದಲ್ಲಿ ಹಾಮೂಲಾಲ ಜಾತ್ರಾ ಮಹೋತ್ಸವದ ಧರ್ಮಸಭೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಯಾರ ಗ್ರಾಮದಲ್ಲಿ ಸಂತ ಹಾಮೂಲಾಲ ಜಾತ್ರಾ ಮಹೋತ್ಸವದ ಧರ್ಮಸಭೆ ಕಾರ್ಯಕ್ರಮವನ್ನು ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರ ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಹಾಮುಲಾಲ್ ಅವರು ಧರ್ಮದ ಬಗ್ಗೆ ಭಕ್ತಾದಿಗಳಲ್ಲಿ ಜಾಗೃತಿ ಮೂಡಿಸಿದವರು ಅವರ ಆದರ್ಶ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಬಂಜಾರ ಸಮಾಜದ ಮುಖಂಡರುಗಳು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.