ಮಧುಗಿರಿ: ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಕೆ.ಎನ್. ರಾಜಣ್ಣ
ಮಧುಗಿರಿ ಪುರಸಭೆಯ 23ನೇ ವಾರ್ಡಿನಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ.ಎನ್. ರಾಜಣ್ಣ ಭಾಗವಹಿಸಿ, ನಿವಾಸಿಗಳ ಅಹವಾಲು ಆಲಿಸಿದರು. ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಿಸಿದರು.