ಯಾದಗಿರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಬೆಂಡೆಬೆಂಬಳಿ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಕಾಳಜಿ ಕೇಂದ್ರ ಆರಂಭ
Yadgir, Yadgir | Sep 29, 2025 ಜಿಲ್ಲೆಯದಾದ್ಯಂತ ಇತ್ತಿಚೆಗೆ ಸುರಿದ ಮಳೆಯಿಂದಾಗಿ ಜಲಾವೃತ್ತಗೊಂಡ ಹಾಗೂ ಮನೆಗಳಲ್ಲಿ ನೀರು ನುಗ್ಗಿದ ಪ್ರದೇಶಗಳ ಜನರಿಗೆ ತಾತ್ಕಾಲಿಕ ಪರಿಹಾರೋಪಾ ಯವಾಗಿ ಸಂತ್ರಸ್ತರಿಗಾಗಿ ಜಿಲ್ಲಾಡಳಿತದಿಂದ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಆರಂಭಿಸಲಾಗಿದೆ. ನಗರದ ಹಲವೆಡೆ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದ್ದು ಮನೆಯಲ್ಲಿ ವಾಸಿಸಲು ಸ್ಥಳವಿಲ್ಲದಾಗಿದೆ. ಊಟ ಹಾಗೂ ವಸತಿ ಸಮಸ್ಯೆ ತಲೆದೂರದಂತೆ ಜಿಲ್ಲಾಡಳಿತ ಪ್ರತಿ ಏರಿಯಾಗೆ ಒಬ್ಬ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂತ್ರಸ್ತರಿಗೆ ತಾತ್ಕಾಲಿಕ ಸೂರಿನ ವ್ಯವಸ್ಥೆ ಮಾಡಿ ಊಟೋಪಚಾರದ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ