ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕರು, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಸಚಿವರು, ಹಿರಿಯ ರಾಜಕಾರಣಿ, ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶಾಮನೂರು ಶಿವಶಂಕರಪ್ಪನವರು ನಿಧನರಾದ ಸುದ್ದಿ ನೋವಿನ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ಕೊಡಲೆಂದು, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆಂದು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.