ಇಂಡಿ: ಗ್ರಾಮದ ಹೊರ ಭಾಗದಲ್ಲಿ ಸೂರ್ಯಕಾಂತಿ ಬೆಳೆ ಹಾನಿಯನ್ನು ವೀಕ್ಷಣೆ ಮಾಡಿದ ಬಿಜೆಪಿ ನಿಯೋಗ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ್ ಗ್ರಾಮದ ಹೊರಭಾಗದಲ್ಲಿ ಸೂರ್ಯಕಾಂತಿ ಬೆಳೆ ಹಾಳಾಗಿರೋದನ್ನ ವಿಪಕ್ಷ ನಾಯಕ ಆರ್ ಅಶೋಕ ಅವರು ವೀಕ್ಷಣೆ ಮಾಡಿದರು. ಆರ್ ಅಶೋಕ ನೇತೃತ್ವದ ಬಿಜೆಪಿ ತಂಡದಿಂದ ಬೆಳೆ ಹಾನಿ ವೀಕ್ಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಎನ್ ರವಿಕುಮಾರ್, ಗುರುಲಿಂಗಪ್ಪ ಅಂಗಡಿ ಸೇರಿದಂತೆ ಹಲವು ಜನ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು