ಅಣ್ಣಿಗೇರಿಯಲ್ಲಿ ಕಾರು ಅಪಘಾತದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಸಾವನ್ನಪ್ಪಿದ ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಅವರ ಪಾರ್ಥಿವ ಶರೀರವನ್ನು ಶನಿವಾರ ಮದ್ಯಾಹ್ನ 2 ಗಂಟೆಗೆ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಧಾರವಾಡದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನರು ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಅಂತಿಮ ದರ್ಶನ ಪಡೆದರು. ನಂತರ ಪಾರ್ಥಿವ ಶರೀರವನ್ನು ಬೈಲಹೊಂಗಲ ತಾಲೂಕಿನ ಮುರಗೋಡಕ್ಕೆ ತೆಗ