ಶ್ರೀನಿವಾಸಪುರ: ನಮ್ಮ ನಾಡು ನುಡಿ ಜಲವನ್ನು ಉಳಿಸಿಕೊಂಡು ಗಡಿಬಾಗದಲ್ಲಿ ಕನ್ನಡವನ್ನು ಉಳಿಸಿ ಪಟ್ಟಣದಲ್ಲಿ ಶಾಸಕ ವೆಂಕಟಶಿವಾರೆಡ್ಡಿ
೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಿ ನಮ್ಮ ನಾಡು ನುಡಿ ಜಲವನ್ನು ಉಳಿಸಿಕೊಂಡು ಗಡಿಬಾಗದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ೭೦ ನೇ ಕನ್ನಡರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ ಶಾಸಕ ಕ್ಷೇತ್ರಾದ್ಯಾಂತ ಅಭಿವೃದ್ಧಿ ಕಾರ್ಯಗಳನ್ನು ಪಕ್ಷಾತೀತವಾಗಿ ಹಮ್ಮಿಕೊಂಡಿದ್ದು, ಗ್ರಾಮೀಣ ಭಾಗದಲ್ಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಸರ್ಕಾರಕ್ಕೆ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವಣೆ ಸಲ್ಲಿಸಿದ್ದೇನೆ. ಅಲ್ಲದೆ, ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಬೇಕಾದ ಮೂಲ ಭೂತ ಸೌಲಭ್ಯಗಳನ್ನು ಕಲ್ಪ