ಚಿಕ್ಕೋಡಿ ಜಿಲ್ಲೆಗೆ ನನ್ನ ಬೆಂಬಲ ಇದೆ ಎಂದು ಶಾಸಕ ದುರ್ಯೋಧನ ಐಹೊಳೆ ಅವರು ಹೇಳಿದರು. ಚಿಕ್ಕೋಡಿ ಜಿಲ್ಲಾ ಕೇಂದ್ರ ಘೋಷಣೆಯಾಗಬೇಕು ಎನ್ನುವ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ತಿಳಿಸಿದರು. ಚಿಕ್ಕೋಡಿ ಜಿಲ್ಲಾ ಘೋಷಣೆ ಕುರಿತು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಲು ಸ್ಪೀಕರ್ಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು ಸೋಮವಾರ ಚಿಕ್ಕೋಡಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಗೆ ಪ್ರಸ್ತಾಪಿಸಲು ಸ್ಪೀಕರ್ಗೆ ಮನವಿ ಸಲ್ಲಿಸಲಾಗಿದೆ. ಸಮಯ ಸಿಕ್ಕರೆ ಈ ಬಗ್ಗೆ ಚರ್ಚೆ ನಡೆಸಲಾಗುವುದು, ಇಲ್ಲದಿದ್ದರೆ ಶೂನ್ಯ ವೇಳೆಯಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.