ಮೂಡುಬಿದಿರೆ: ಮಾಂಟ್ರಾಡಿಯಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ ಉದ್ಘಾಟನೆ
ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಇಲ್ಲಿನ 2023-2024ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಾಂಟ್ರಾಡಿ ಇಲ್ಲಿ ನೆರವೇರಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ ಡಾ. ಸುರೇಶ್ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರು ವಿಶ್ವವಿದ್ಯಾನಿಲಯ ಕಾಲೇಜ್ ನೆಲ್ಯಾಡಿ ಉದ್ಘಾಟನೆಯನ್ನು ನೆರವೇರಿಸಿ ರಾಷ್ಟ್ರೀಯ ಸೇವಾ ಯೋಜನೆಯ ಕೆಲವು ವಿಚಾರಗಳನ್ನು ಹಾಗೂ ಅದರಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ವಿಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಡಾ. ದಯಾನಂದ ನಾಯ್ಕ್ ಅವರ ಅನುಪಸ್ಥಿತಿಯಲ್ಲಿ ಅಧ್ಯಕ್ಷರಾಗಿ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಯಾದ ಶ್ರೀಮತಿ ಗಾಯತ್ರಿ ಇವರು ಉಪಸ್ಥಿತರಿದ್ದು ಅಧ್ಯಕ್ಷೀಯ ಭಾಷಣವನ್ನು ಮಾಡಿದರು.