ಶಿವಮೊಗ್ಗ: ಹೊಸನಗರದಲ್ಲಿ ನಡೆದ ಅಭಿನಂದನ ಸಮಾರಂಭದಲ್ಲಿ ಭಾಗಿಯಾದ ಸಂಸದ ಬಿ ವೈ ರಾಘವೇಂದ್ರ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಬಿಜೆಪಿಯ ಹೊಸನಗರ ಮಂಡಲದ ವತಿಯಿಂದ ಪಟ್ಟಣದ ಈಡಿಗರ ಭವನದಲ್ಲಿ ಮಂಗಳವಾರ ಲೋಕಸಭಾ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾರಣರಾದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ನೂತನವಾಗಿ ಆಯ್ಕೆಯಾಗಿರುವ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಮತ್ತು ಡಾ.ಧನಂಜಯ್ ಸರ್ಜಿ ಅವರನ್ನ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸೇರದಂತೆ ಹಲವರು ಉಪಸ್ಥಿತರಿದ್ದರು