ಬಾಗಲಕೋಟೆ: ಲಿಂಗಾಪುರ ಗ್ರಾಮದಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಯುವಕ ಸಾವು, ಹೊಲದ ಜಗಳಕ್ಕೆ ಯುವಕನ ಕೊಲೆ
ರಾಡ್ ನಿಂದ ಹೊಡೆದು ಯುವಕನನ್ನ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.ಕಳೆದ ಅಕ್ಟೋಬರ್ 16.ರಂದು ಆಸ್ತಿ ವಿವಾದದ ಹಿನ್ನೆಲೆ ಎರಡು ಕುಟುಂಬಗಳ ನಡುವಿನ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಒಂದು ಕಡೆಯ ಗುಂಪಿನವರಿಂದ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಯುವಕ ವಿಶ್ವನಾಥ ಮರೆಮ್ಮನವರ್ (26) ಚಿಕಿತ್ಸೆ ಫಲಕಾರಿಯಾಗದೇ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಳೆದ ಅಕ್ಟೋಬರ್ 16 ರಂದು ಮಾರಣಾಂತಿಕ ಹಲ್ಲೆ ನಡೆದಿದೆ.