ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಅವರು ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಅರಮನೆ ಮೈದಾನದ ಬಳಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.
ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು.