ಮಸ್ಕಿ: 2 ಕೋಟಿ ವೆಚ್ಚದಲ್ಲಿ ಹೂವಿನಭಾವಿ ಕೆರೆ ಅಭಿವೃದ್ಧ ಯೋಜನೆ ಮಸ್ಕಿ ಶಾಸಕ ಪರಿಶೀಲನೆ
Maski, Raichur | Oct 20, 2025 ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹೂವಿನಭಾವಿ ಗ್ರಾಮದ ಬಳಿ ಸಣ್ಣ ನೀರಾವರಿ ಇಲಾಖೆಯಿಂದ 2 ಕೋಟಿ ವೆಚ್ಚದಲ್ಲಿ ನಡೆದಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಹಿರಿಯ ಅಧಿಕಾರಿಗಳ ಜೊತೆ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಜಂಟಿ ಪರಿಶೀಲನೆ ಮಾಡಿದರು. ಈ ವೇಳೆ ಹೂವಿನಭಾವಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರ ಮುಗಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.