ಹಾವೇರಿ: ಮಕ್ಕಳ ಆರೋಗ್ಯ ಹಾಗೂ ಶಿಕ್ಷಣದ ಮೇಲೆ ಭಾರತದ ಭವಿಷ್ಯ ನಿಂತಿದೆ; ನಗರದಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ
Haveri, Haveri | Sep 17, 2025 ತಾಯಂದಿರು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಭಾರತ ದೇಶದ ಭವಿಷ್ಯ ನಿಂತಿದೆ. ಪ್ರಧಾನಿ ನರೇಂದ್ರ ಮೋದಿಯವರು ಆರೋಗ್ಯ ಕ್ಷೇತ್ರಕ್ಕೆ ಬಹಳ ದೊಡ್ಡ ಒತ್ತು ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ" ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಏರ್ಪಡಿಸಿದ ಸ್ವಸ್ಥನಾರಿ - ಸಶಕ್ತ ಪರಿವಾರ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.