ಚಿಟಗುಪ್ಪ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ: ಮಿನಕೇರಾದಲ್ಲಿ ಪಿಎಸ್ಐ ಮಹೀಂದ್ರ ಕುಮಾರ್
ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಜೊತೆಗೆ ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ಪಿಎಸ್ಐ ಮಹೀಂದ್ರ ಕುಮಾರ್ ಅವರು ಅಭಿಪ್ರಾಯಪಟ್ಟರು. ತಾಲೂಕಿನ ಮಿನಕೇರಾದಲ್ಲಿ ವೀರಭದ್ರೇಶ್ವರ ಜಾತ್ರೆ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 3:30ಕ್ಕೆ ನಡೆದ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.